ಗೃಹಲಕ್ಷ್ಮೀ ಯೋಜನೆಯನ್ನು ಮನೆ ಮನೆಗೆ ತಲುಪಿಸಿ.-CEO ರಾಹುಲ್ ರತ್ನಂ ಪಾಂಡೆ.

Loading

ಕನಕಗಿರಿ :-ತಾಲ್ಲೂಕಿನ ಹುಲಿಹೈದರ್ ಗ್ರಾಮ ಪಂಚಾಯತಿಗೆ ಅನಿರೀಕ್ಷಿತ ಭೇಟಿ ನೀಡಿದ ಮಾನ್ಯ ಮುಖ್ಯ ಕಾರ್ಯನಿರ್ವಕಾಧಿಕಾರಿಗಳಾದ ಶ್ರೀ ರಾಹುಲ್ ರತ್ನಂ ಪಾಂಡೆ ರವರು ಗ್ರಾಮ ಪಂಚಾಯತಿಯ ಬಾಪೂಜಿ ಸೇವ ಕೇಂದ್ರಕ್ಕೆ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ನೋಂದಾಯಿಸುವ ಕುರಿತು ಪರಿಶೀಲಿಸಿದರು.

ನಂತರ ಮಾತನಾಡಿದ ಅವರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಫಲಾನುಭವಿಗಳ ಪಟ್ಟಿ ಪಡೆದು ಅವರನ್ನು ಸಂಪರ್ಕಿಸಿ ಅರ್ಜಿಗಳನ್ನು ನೋಂದಾಯಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಕನಕಗಿರಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಚಂದ್ರಶೇಖರ್ ಬಿ ಕಂದಕೂರು ಸರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಅಮರೇಶ್ ರಾಥೋಡ್. ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ಸುಕನ್ಯಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *