ಹಾಲಿನ ದರ ಮತ್ತೆ ಏರಿಕೆ – ಜನಸಾಮಾನ್ಯರಿಗೆ ಮತ್ತೆ ಶಾಕ್

Loading

ಬೆಂಗಳೂರು: ದಿನ ಬಳಕೆಯ ವಸ್ತುಗಳ ಬೆಲೆ ದಿನೇ ದಿನೇ ಹೆಚ್ಚುತ್ತಿರುವುದರ ನಡುವೆಯೇ ಇದೀಗ ಹಾಲಿನ ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟಲಿದ್ದು, ಆಗಸ್ಟ್ 01 ರಿಂದ ಪ್ರತೀ ಲೀಟರ್ ಹಾಲಿನ ಬೆಲೆ ಏರಿಕೆಗೆ ಸರಕಾರವು ನಿರ್ಧರಿಸಿದೆ.

ಪ್ರತಿ ಲೀಟರ್‌ಗೆ ಹಾಲಿಗೆ 5 ರೂ. ಹೆಚ್ಚಳಕ್ಕೆ ಕೆಎಂಎಫ್ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಸಭೆಯಲ್ಲಿ ಲೀಟರ್ ಗೆ 3 ರೂ. ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ. ಆದ್ದರಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

Leave a Reply

Your email address will not be published. Required fields are marked *