ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ ಕಾರ್ಯಕ್ರಮ

Loading

ಹೊಸಪೇಟೆ (ವಿಜಯನಗರ) ಜೂನ್ 07 : ವಸತಿ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರು ಜೂನ್ ಮಾಹೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಜೂನ್ 11ರಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿAದ ರಸ್ತೆಯ ಮುಖಾಂತರ ಹೊರಟು ಬೆಳಿಗ್ಗೆ 11 ಗಂಟೆಗೆ ವಿಜಯನಗರ ಜಿಲ್ಲೆಗೆ ಆಗಮಿಸುವರು. ಬಳಿಕ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಇತರೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ರಿಂದ ಜಿಲ್ಲೆಯ ವಿವಿಧೆಡೆ ಸ್ಥಳ ಪರಿವೀಕ್ಷಣೆ ನಡೆಸಲಿದ್ದಾರೆ. ಬಳಿಕ ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವರು.

ಜೂನ್ 12ರಂದು ಬೆಳಿಗ್ಗೆ 10 ಗಂಟೆಯಿಂದ ಜಿಲ್ಲೆಯಲ್ಲಿ ಪುನಃ ಸ್ಥಳ ಪರಿಶೀಲನೆ ನಡೆಸುವರು. ಅಂದು ಮಧ್ಯಾಹ್ನ 2 ಗಂಟೆಗೆ ವಿಜಯನಗರದಿಂದ ನಿರ್ಗಮಿಸಿ ರಸ್ತೆಯ ಮುಖಾಂತರ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *