ಪೂರ್ವಭಾವಿ ಸಿದ್ಧತಾ ಸಭೆ.ಎಸ್ಸೆಸ್ಸೆಲ್ಸಿ ಪರೀಕ್ಷೆ 2 ಅಚ್ಚುಕಟ್ಟಾಗಿ ನಡೆಯಲಿ: ಎಂ.ಎಸ್.ದಿವಾಕರ

Loading

ಹೊಸಪೇಟೆ (ವಿಜಯನಗರ) : ಜೂನ್ 14 ರಿಂದ ಜೂನ್ 22ರವರೆಗೆ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ 2 ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯಿಂದ ಜೂನ್ 12ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಗಸೂಚಿಯನುಸಾರ ಪರೀಕ್ಷೆ ನಡೆಯಬೇಕು. ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಪಾಲನೆಗೆ ಸೂಕ್ತ ವ್ಯವಸ್ಥೆಯಾಗಬೇಕು. ಬೇರೆ ಬೇರೆ ಪರೀಕ್ಷಾ ಕಾರ್ಯಗಳಿಗೆ ನಿಯೋಜನೆಗೊಂಡ ವಿವಿಧ ಹಂತದ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯ ಅರಿತು ಜವಾಬ್ದಾರಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಹೊಸಪೇಟೆ ತಾಲೂಕಿನಲ್ಲಿ 8, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 2, ಹರಪನಹಳ್ಳಿ ತಾಲೂಕಿನಲ್ಲಿ 5, ಹಡಗಲಿ ತಾಲೂಕಿನಲ್ಲಿ 3, ಕೂಡ್ಲಿಗಿ ತಾಲೂಕಿನಲ್ಲಿ 4 ಸೇರಿ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ 6,973 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊAಡಿದ್ದಾರೆ. ಈ ಪರೀಕ್ಷೆಗೆ ಕೇಂದ್ರ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಸರಕಾರಿ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯ ಗುರುಗಳನ್ನು ಮಂಡಳಿಯಿAದ ನೇಮಕ ಮಾಡಲಾಗಿದೆ. ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಪ್ರೌಢಶಾಲಾ ಸಹ ಶಿಕ್ಷಕರನ್ನು ನೇಮಕ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ನಿಯೋಜಿಸಲಾಗಿದೆ. ಮಾರ್ಗಾಧಿಕಾರಿಗಳ ನೇಮಕ ಮಾಡಲಾಗಿದೆ. ಪ್ರತಿ ಕೇಂದ್ರಕ್ಕೆ ಸ್ಥಾನಿಕ ಜಾಗೃತ ದಳವನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಯುವರಾಜ ನಾಯ್ಕ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿಬಾಬು, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಲೀಂ ಪಾಶಾ, ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಅಧೀಕ್ಷಕರು ಸೇರಿದಂತೆ ಇನ್ನೀತರ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *