ಹೊಸಪೇಟೆ (ವಿಜಯನಗರ) : ಸಫಾಯಿ ಕರ್ಮಚಾರಿ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾದ ಎಂ.ವೆಂಕಟೇಶ್ ಅವರು ಜೂನ್ 14ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲೆಯ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಫಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಇದಕ್ಕು ಮೊದಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಫಾಯಿ ಕರ್ಮಚಾರಿಗಳ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಸಂಬAಧಪಟ್ಟ ಅಧಿಕಾರಿಗಳು, ಸಫಾಯಿ ಕರ್ಮಚಾರಿ ಸಂಘದ ನಾಯಕರುಗಳು ಮತ್ತು ಸಫಾಯಿ ಕರ್ಮಚಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ವಿಜಯನಗರ ಜಿಲ್ಲೆಯ ಜಿಲ್ಲಾ ನಗರಾಬಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.