ಹೊಸಪೇಟೆ (ವಿಜಯನಗರ) : ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕಾಗಿ ಜಿಲ್ಲೆಯ ಎಲ್ಲ ತಹಸೀಲ್ದಾರರು ಮತ್ತು ಆಯಾ ತಾಲೂಕಿನ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಆಯಾ ತಾಲೂಕಿನ ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶಿಸಿದ್ದಾರೆ.
ಜೂನ್ 17ರಂದು ಬಕ್ರೀದ್ ಹಬ್ಬ ಮತು ಬಾಸಿಖುದ್ದಾ ನಡೆಯಲಿದೆ. ಮುಸ್ಲಿಂ ಸಮುದಾಯವರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ, ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸುವ ಮೂಲಕ ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಜೂನ್ 18ರವರೆಗೆ ತಹಸೀಲ್ದಾರರು ಮತ್ತು ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕಿನ ಕೇಂದ್ರದಲ್ಲಿರಬೇಕು. ಡಿಎಸ್ಪಿ, ಸಿಪಿಐ ಮತ್ತು ಪಿಐಗಳಿಗೆ ಲಭ್ಯವಿರುವಂತೆ ಸೂಚಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.