ಹರಪನಹಳ್ಳಿಯಲ್ಲಿ ಜುಲೈ 1ರಂದು ಜನಸ್ಪಂದನಾ ಕಾರ್ಯಕ್ರಮ

Loading

ಹೊಸಪೇಟೆ (ವಿಜಯನಗರ) : ವಿಜಯನಗರ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹರಪನಹಳ್ಳಿಯಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಜುಲೈ 1ರಂದು ಆಯೋಜಿಸಲಾಗಿದೆ.

ಈ ಮೊದಲು ಜೂನ್ 24 ರಂದು ಹರಪನಹಳ್ಳಿಯಲ್ಲಿ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಜೂನ್ 24ರಂದು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ವಿಭಾಗದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆದ ಕಾರಣ ಹರಪನಹಳ್ಳಿ ತಾಲೂಕಿನಲ್ಲಿ ಜೂನ್ 24ರ ಬದಲಾಗಿ ಜುಲೈ 1 ರಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿರಬೇಕು.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *