ಹೊಸಪೇಟೆ (ವಿಜಯನಗರ) : ಜೂನ್ 30ರಂದು ಜಿಲ್ಲೆಯಲ್ಲಿ ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2024ರ 15 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.
ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಈ ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಪರೀಕ್ಷಾರ್ಥಿಗಳಲ್ಲದ/ಪರೀಕ್ಷಾ ಉಸ್ತುವಾರಿ ಇಲ್ಲದ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಅಥವಾ ಯಾವುದೇ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿ ಗುಂಪುಗಳಿಗೆ ಪ್ರವೇಶವನ್ನು ಕಡ್ಡಾಯ ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಆದೇಶವು ಪರೀಕ್ಷಾ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗೆ ಅನ್ವಿಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.