ಹೊಸಪೇಟೆ (ವಿಜಯನಗರ) : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಾರ್ಷಿಕ ಆದಾಯ ಮಿತಿ : ಪ್ರವರ್ಗ-1 ಎಸ್.ಸಿ ಮತ್ತು ಎಸ್.ಟಿ 1.ಲಕ್ಷ ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 44500 ರೂ. ಆದಾಯ ಮಿತಿ ನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 10 ಆಗಿರುತ್ತದೆ.
ಹೊಸ ಅರ್ಜಿಗಳನ್ನು ತಾಲೂಕ ಕಲ್ಯಾಣಾಧಿಕಾರಿಗಳು ಪರಿಶೀಲನೆ ಮಾಡಲು ಜುಲೈ 12 ಅಂತಿಮ ದಿನವಾಗಿರುತ್ತದೆ. ತಾಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆಪಟ್ಟಿಯನ್ನು ಜುಲೈ 18ರಂದು ಪ್ರಕಟಿಸಲಾಗುವುದು.
ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಜುಲೈ 20 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು https://shp.karna taka.gov.in/bcwd ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ /ತಾಲ್ಲೂಕ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:8050770004 ಮತ್ತು 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.