ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಅಹ್ವಾನ

Loading

ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನ ಐಐಟಿ, ಐಐಐಟಿ, ಐಐಎಮ್, ಐಐಎಸಿಆರ್ ಮತ್ತು ಎನ್‌ಎಲ್‌ಯು ಸೇರಿದಂತೆ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸರ್ಕಾರದಿಂದ ಶಾಸನಬದ್ದ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ನ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಪೋತ್ಸಾಹಧನವನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು https://sevasindhu.karnataka.gov.in/sevasindhu/departmentservices ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ  http://dom.karnataka.gov.in  ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಕಚೇರಿ ಮತ್ತು ಜಿಲ್ಲಾ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *