ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನಲ್ಲಿ ಪೂರ್ಣ ಕಾಲಿಕವಾಗಿ ಪಿಹೆಚ್‌ಡಿ ಸಂಶೋಧನೆ ಕೈಗೊಳ್ಳುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಜೆಆರ್‌ಎಪ್) ಮಾದರಿ ಫೆಲೋಶಿಪ್ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು., ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ)., ಸರ್ಕಾರಿ-ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ., ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ ಪಾಲಕರ ಅಥವಾ ಪೋಷಕರ ವಾರ್ಷಿಕ ಆದಾಯವು 8 ಲಕ್ಷ ರೂ.ಗಳನ್ನು ಮೀರಿರಬಾರದು., ವಿದ್ಯಾರ್ಥಿಗಳು ಸರ್ಕಾರದಿಂದ ಶಾಸನಬದ್ದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರಬೇಕು., ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ವರ್ಷ ಮೀರಬಾರದು., ಕೋರ್ಸ್ ಪೂರ್ಣ ಕಾಲಿಕವಾಗಿಬೇಕು.
ಅರ್ಜಿದಾರರು https://sevasindhu.karnataka.gov.in/sevasindhu/departmentservices ಲಿಂಕ್ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ http://dom.karnataka.gov.in ಅನ್ನು ವೀಕ್ಷಿಸಿ ಅಥವಾ ಜಿಲ್ಲಾ ಕಚೇರಿ ಮತ್ತು ಜಿಲ್ಲಾ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.