ಹೊಸಪೇಟೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ ಆರಂಭ

Loading

ಹೊಸಪೇಟೆ (ವಿಜಯನಗರ) : ಹೊಸಪೇಟೆಯ ಸರಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ 2024ನೇ ಸಾಲಿನಲ್ಲಿ ಖಾಲಿ ಇರುವ ಸಿಒಪಿಎ-15, ಆರ್‌ಎಸಿಟಿ-11, ಎಂಇವಿ-10, ಸಿಎನ್‌ಸಿ-18 ಮತ್ತು ಐಆರ್‌ಡಿಎಂಟಿ-6 ಸ್ಥಾನಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ಆಗಷ್ಟ್ 31 ರೊಳಗೆ ಆಫ್‌ಲೈನ್ ಮೂಲಕ ಇಲಾಖೆಯ ವೆಬ್‌ಸೈಟ್ ಮೂಲಕ ಸ್ವತ: ಅಥವಾ ಹೊಸಪೇಟೆ ಜಂಬುನಾಥ ಹಳ್ಳಿ ರಸ್ತೆಯಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಹೆಲ್ಪ್ಡೆಸ್ಕ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಬAಧಿಸಿದ ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರಾಚಾರ್ಯರನ್ನು ಸಂಪರ್ಕಿಸಬಹುದು ಎಂದು ಹೊಸಪೇಟೆಯ ಸರಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆರಿಟ್ ಆಧಾರದÀಲ್ಲಿ ಪ್ರಕ್ರಿಯೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9448173151ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *