ಕಾನೂನು ಪದವೀಧರರ ವೃತ್ತಿ ತರಬ್ಭೆತಿ:ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನ

Loading

ಹೊಸಪೇಟೆ (ವಿಜಯನಗರ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶಿಷ್ಯವೇತನ ಪಡೆಯಲು ಇಚ್ಚಿಸುವ ಕಾನೂನು ಪದವೀಧರರು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 31 ರೊಳಗೆ ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಗೆ ಸಲ್ಲಿಸಬಹುದು.
ಷರತ್ತುಗಳು: ಅಭ್ಯರ್ಥಿಗಳ ಕುಂಟುAಬದ ವಾರ್ಷಿಕ ಆದಾಯ 3.50 ಲಕ್ಷ ರೂ ಮೀರಿರಬಾರದು. ಅಭ್ಯರ್ಥಿಗಳು ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿರಬೇಕು.

ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿದ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಯಾಗಿರಬೇಕು. ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿರುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷದೊಳಗಿರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *