ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Loading

ಹೊಸಪೇಟೆ (ವಿಜಯನಗರ) : ಹಗರಿಬೊಮ್ಮನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರೆ ಬಡ ಜನಾಂಗದ ಫಲಾನುಭವಿಗಳಿಗೆ ಹಾಗೂ ಅಂಗವಿಕಲ ಫಲಾನುಭವಿಗಳಿಗೆ 2024-25ನೇ ಸಾಲಿನ ಎಸ್.ಎಫ್.ಸಿ. ಯೋಜನೆಯ 24.10 ರಷ್ಟು, 7.25 ರಷ್ಟು ಹಾಗೂ 5 ರಷ್ಟು ಅನುದಾನದಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಸೆಪ್ಟಂಬರ್ 13 ರ ಒಳಗಾಗಿ ಹಗರಿಬೊಮ್ಮನಹಳ್ಳಿಯ ಪುರಸಭೆ ಕಾರ್ಯಾಲಯಕ್ಕೆ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.


ಪುರಸಭೆ ವ್ಯಾಪ್ತಿಯಲ್ಲಿ ಬರುವ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದಡಿ ಎಂ.ಎಸ್. ಆಫೀಸ್, ಡಿ.ಟಿ.ಪಿ. ಮತ್ತು ಅಕೌಂಟಿAಗ್ ಅಂಡ್ ಟ್ಯಾಲಿ ಕಂಪ್ಯೂಟರ್ ತರಬೇತಿಯನ್ನು ನೀಡುವುದು. ಎಸ್.ಎಫ್.ಸಿ. ಯೋಜನೆಯಡಿ 24.10 ರಷ್ಟು ಮಂಜೂರಾಗಿದ್ದು, ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 2 ಲಕ್ಷದಿಂದ 5.68 ಲಕ್ಷದವರೆಗೆ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 1.20 ಲಕ್ಷದಿಂದ 2 ಲಕ್ಷದವರೆಗೆ ಸಹಾಯಧನ ನೀಡಲಾಗುವುದು.


ಇತರೆ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದಡಿ ಎಂ.ಎಸ್. ಆಫೀಸ್, ಡಿ.ಟಿ.ಪಿ.ಮತ್ತು ಅಕೌಂಟಿAಗ್ ಅಂಡ್ ಟ್ಯಾಲಿ ಕಂಪ್ಯೂಟರ್ ತರಬೇತಿ ನೀಡಲಾಗುವುದು. ಎಸ್.ಎಫ್.ಸಿ. ಯೋಜನೆಯಡಿ 7.25 ರಷ್ಟು ಮಂಜೂರಾಗಿದ್ದು, 2.32 ಲಕ್ಷದವರೆಗೆ ಸಹಾಯಧನ ನೀಡಲಾಗುವುದು. ಮತ್ತು ಅದೇ ರೀತಿ ಅಂಗವಿಕಲ ಫಲಾನುಭವಿಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಎಸ್.ಎಫ್.ಸಿ. ಯೋಜನೆಯಡಿ 5 ರಷ್ಟು ಮಂಜೂರಾಗಿದ್ದು, 4 ಲಕ್ಷದವರೆಗೆ ಸಹಾಯಧನ ನೀಡಲಾಗುವುದು.


ದಾಖಲಾತಿಗಳು: ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಇತ್ತೀಚಿನ 4 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಶಿಕ್ಷಣಕ್ಕೆ ಸಂಬAಧಿಸಿದAತೆ ಪ್ರಸಕ್ತ 2024-25 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ವ್ಯಾಸಂಗ ಪ್ರಮಾಣ ಪತ್ರ, ಪ್ರವೇಶಾತಿ ಪಡೆದ ರಶೀದಿ ಪ್ರತಿ, ಅಂಕಪಟ್ಟಿಗಳು, ಹಾಗೂ ಎಂ.ಎಸ್. ಆಫೀಸ್, ಡಿ.ಟಿ.ಪಿ. ಮತ್ತು ಅಕೌಂಟಿAಗ್ ಅಂಡ್ ಟ್ಯಾಲಿ ಕಂಪ್ಯೂಟರ್ ತರಬೇತಿಗಾಗಿ ಅರ್ಜಿ ಸಲ್ಲಿಸುವ ಫಲಾನುಭವಿಗಳು ಮೇಲ್ಕಂಡ ದಾಖಲಾತಿಗಳೊಂದಿಗೆ ನಿಗಧಿಪಡಿಸಿದ ವಿದ್ಯಾರ್ಹತೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಅಂಕಪಟ್ಟಿಗಳೊAದಿಗೆ ಅರ್ಜಿ ಸಲ್ಲಿಸಬೇಕು ಮತ್ತು ಅಂಗವಿಕಲರ ಕಲ್ಯಾಣ ಕಾರ್ಯಕ್ರಮದಡಿ ವೈಯಕ್ತಿಕ ಶೌಚಾಲಯಕ್ಕಾಗಿ ಅರ್ಜಿ ಸಲ್ಲಿಸುವ ಅಂಗವಿಕಲರು, ಮೇಲ್ಕಂಡ ದಾಖಲಾತಿಗಳೊಂದಿಗೆ ಅಂಗವಿಕಲರ ಪ್ರಮಾಣ ಪತ್ರ, ಮನೆಯ ನಮೂನೆ-3, ಶೌಚಾಲಯ ನಿರ್ಮಾಣ ಮಾಡಿಕೊಳ್ಳುವ ಸ್ಥಳದ ಛಾಯಾಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಹಗರಿಬೊಮ್ಮನಹಳ್ಳಿ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *