ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

Loading

ಹೊಸಪೇಟೆ (ವಿಜಯನಗರ) ಸೆಪ್ಟೆಂಬರ್ 11: ಹೂವಿನಹಡಗಲಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ಖಾಲಿ ಇರುವ ಹ್ಯಾರಡ-1ನೇ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆಯ ಗೌರವ ಸೇವೆ ಪಡೆಯಲು ಸೆಪ್ಟೆಂಬರ್ 7ರಂದು ಪ್ರಕಟಣೆ ಹೊರಡಿಸಲಾಗಿದೆ. ಆನ್‌ಲೈನ್ ಮೂಲಕ ಅಕ್ಟೋಬರ್ 6ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹೂವಿನಹಡಗಲಿ ಇಲ್ಲಿ, ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *