ಹೊಸಪೇಟೆ (ವಿಜಯನಗರ) ಸೆಪ್ಟೆಂಬರ್ 11,: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮರಿಯಮ್ಮನಹಳ್ಳಿಯಲ್ಲಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಗಣಿತ, ಸಮಾಜ ವಿಜ್ಞಾನ ಶಿಕ್ಷಕರು ಬೇಕಾಗಿದ್ದು, ಆಸಕ್ತಿ ಇದ್ದಂತಹ ಅಭ್ಯರ್ಥಿಗಳು ನಿಗದಿತ ಪದವಿ ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9964732718ಗೆ ಸಂಪರ್ಕಿಸಬಹುದಾಗಿದೆ ಎಂದು ಮರಿಯಮ್ಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.