ಹೊಸಪೇಟೆ (ವಿಜಯನಗರ) ಸೆಪ್ಟೆಂಬರ್ 11 : 2024-25ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮರಿಯಮ್ಮನಹಳ್ಳಿಗೆ ಮರಿಯಮ್ಮನಹಳ್ಳಿಯಲ್ಲಿ ಬಾಡಿಗೆ ಕಟ್ಟಡ ಬೇಕಿರುತ್ತದೆ.
ಮರಿಯಮ್ಮನಹಳ್ಳಿಯಲ್ಲಿ ವಸತಿ ಶಾಲೆ ಪ್ರಾರಂಭಿಸಲು ಸೂಕ್ತ ವಾತಾವರಣ ಹಾಗೂ ಕಟ್ಟಡವಿದ್ದಲ್ಲಿ ಬಾಡಿಗೆ ಪಡೆಯಲಾಗುವುದು. ಅಂತಹ ಕಟ್ಟಡ ಹೊಂದಿದ ಕಟ್ಟಡ ಮಾಲೀಕರು ವಸತಿ ಶಾಲೆಗೆ ಕಟ್ಟಡ ಬಾಡಿಗೆ ನೀಡಲು ಇಚ್ಛಿಸಿದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ:9964732718ಗೆ ಸಂಪರ್ಕಿಸಬಹುದಾಗಿದೆ ಎಂದು ಮರಿಯಮ್ಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.