ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲಿ: ಬಿ.ಜೆಡ್.ಜಮೀರ್ ಅಹ್ಮದ್‌ಖಾನ್ ಮನವಿ

Loading

ಹೊಸಪೇಟೆ ವಿಜಯನಗರ ಜಿಲ್ಲೆ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಜಯನಗರ ಜಿಲ್ಲೆಯಲ್ಲಿ ಸೆಪ್ಟೆಂಬರ್ 15ರಂದು ನಡೆಯುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೊಸಪೇಟೆ ನಗರ ಸೇರಿದಂತೆ ಜಿಲ್ಲೆಯ ಜನರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ವಸತಿ, ವಖ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ. ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹಮದ್ ಖಾನ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಅಂದು ಬೆಳಗ್ಗೆ ಟಿ.ಬಿ.ಡ್ಯಾಮ್ ನ ಮೊದಲನೇ ಸೇತುವೆಯಿಂದ ಆರಂಭವಾಗಿ ಭುವನಹಳ್ಳಿ ಗ್ರಾಮದವರೆಗೆ ಅಂದಾಜು 40 ಕಿಲೋ ಮೀಟರ್ ಮಾನವ ಸರಪಳಿಯನ್ನು ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ರಚಿಸಲಾಗುತ್ತದೆ.
ಮಾನ್ಯ ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವು ಅಂದು ರಾಜ್ಯಾದ್ಯಂತ ನಡೆಯುತ್ತಿದೆ. ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆವರೆಗೆ ಆಯೋಜನೆಯಾಗಿದೆ.


ವಿಜಯನಗರ ಜಿಲ್ಲೆಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಈಗಾಗಲೇ ಜಿಲ್ಲಾಡಳಿತದಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಸ್ವ ಇಚ್ಚೆಯಿಂದ ಭಾಗಿಯಾಗಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *