ಸೆ.24ಕ್ಕೆ ಕೇಂದ್ರ ಸಂವಹನ ಇಲಾಖೆಯಿಂದ ಪೋಷಣ ಅಭಿಯಾನ

Loading

ಹೊಸಪೇಟೆ (ವಿಜಯನಗರ) : ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಶಿವಮೊಗ್ಗ-ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆ, ಹೂವಿನಹಡಗಲಿಯ ಆರೋಗ್ಯ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಜಯನಗರ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟಂಬರ್ 24ರಂದು ಬೆಳಿಗ್ಗೆ 11 ಗಂಟೆಗೆ ಹೂವಿನಹಡಗಲಿಯ ಪಂಚಮಸಾಲಿ ಸಮುದಾಯ ಭವನದಲ್ಲಿ ಪಿ.ಎಂ. ಸೂರ್ಯ ಘರ್ ಯೋಜನೆ, ವಿಕಸಿತ ಭಾರತ ಬಜೆಟ್, ಹೊಸ ಕ್ರಿಮಿನಲ್ ಕಾನೂನುಗಳು ಹಾಗೂ ಪಿ.ಎಂ ದೂರದರ್ಶಿತ್ವ-2047ರ ಪೋಷಣ ಅಭಿಯಾನ ಮತ್ತು ಛಾಯಾಚಿತ್ರ ಪ್ರದರ್ಶನ ಹಾಗೂ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಲಿದೆ.


ಮಾನ್ಯ ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್‌ಖಾನ್ ಅವರು ಛಾಯಚಿತ್ರ ಪ್ರದರ್ಶನ ಉದ್ಘಾಟಿಸುವರು. ಬಳ್ಳಾರಿ ಲೋಕಸಭಾ ಸದಸ್ಯರಾದ ಈ. ತುಕಾರಾಂ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೃಷ್ಣ ನಾಯಕ ಅವರು ಅಧ್ಯಕ್ಷತೆ ವಹಿಸುವರು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಭಾರತ ಸರ್ಕಾರದ ವಾರ್ತಾ ಶಾಖೆ (ಪಿ.ಐ.ಬಿ) ಕೇಂದ್ರ ಸಂವಹನ ಇಲಾಖೆ, ಕರ್ನಾಟಕ ವಲಯದ ಹೆಚ್ಚುವರಿ ಮಹಾ ನಿರ್ದೇಶಕರಾದ ಎಸ್.ಜಿ.ರವೀಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ವೇತಾ.ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ಎಲ್.ಆರ್.ಶಂಕರ್ ನಾಯ್ಕ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಉಪಸ್ಥಿತರಿರುವರು.


ವಿಶೇಷ ಉಪನ್ಯಾಸ: ಹೂವಿನಹಡಗಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಸ್ವಪ್ನಾ ಕಟ್ಟಿ ಅವರು ಪೋಷಣ ಅಭಿಯಾನದ ಕುರಿತು, ಹೂವಿನಹಡಗಲಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮನಗೌಡ ಅವರು ಮಾತೃವಂದನೆ ಮತ್ತು ಪೋಷಣಾ ಅಭಿಯಾನದ ಕುರಿತು, ಹೂವಿನಹಡಗಲಿಯ ಪರಿಸರ ಅಭಿಯಂತರರಾದ ಜಗದೀಶ್ ಹಿರೇಮಠ ಅವರು ಸ್ವಚ್ಛ ಭಾರತ ಮಿಷನ್ ಕುರಿತು, ಹೂವಿನಹಡಗಲಿಯ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀ ಅವರು ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದ ಕುರಿತು ಮತ್ತು ಹೂವಿನಹಡಗಲಿಯ ಎಸ್.ಬಿ.ಐ. ಬ್ಯಾಂಕ್ ಮ್ಯಾನೇಜರ್ ಯಶ್ವಂತ್ ಕುಮಾರ್ ನಾಯ್ಕ್ ಅವರು ಪ್ರಧಾಮಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ-ನಿಧಿಯ ಯೋಜನೆಯ ಬಗ್ಗೆ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *