ಹೊಸಪೇಟೆ (ವಿಜಯನಗರ) : ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17ರಂತೆ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜೂನ್ 29ರಂದು ಬೆಳಿಗ್ಗೆ 11ಕ್ಕೆ ಹೊಸಪೇಟೆ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಗೆ ಸದಸ್ಯರು ಆಗಮಿಸಬೇಕು ಎಂದು ಹೊಸಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.