ಹೊಸಪೇಟೆ ವಿಜಯನಗರ : ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ದೀಪಾ ಚೋಳನ್ ಅವರು ಜೂನ್ 29ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 10.30ಕ್ಕೆ ಹೊಸಪೇಟೆ ನಗರದಲ್ಲಿನ ಜಿಲ್ಲಾಡಳಿತ ಭವನದಲ್ಲಿನ ಸಭಾಂಗಣದಲ್ಲಿ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ನಗರಾಭಿವೃದ್ಧಿ ಪ್ರಾಧಿಕಾರಗಳು, ಕೆಯುಐಡಿಎಫ್ ಸಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 5 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.