ಹೊಸಪೇಟೆ (ವಿಜಯನಗರ) : ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್. ಮೇಹರೋಜ್ ಖಾನ್ ಅವರು ಆಗಸ್ಟ್ 28ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ವಿಜಯನಗರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಹಾಗೂ ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು. ಬಳಿಕ ಮಧ್ಯಾಹ್ನ 1.30ಕ್ಕೆ ಹೊಸಪೇಟೆಯಿಂದ ನಿರ್ಗಮಿಸಿ ಕೊಪ್ಪಳ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಹೆಚ್ಚುವರಿ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.