ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಆಗಸ್ಟ್ 30ಕ್ಕೆ
ಹೊಸಪೇಟೆ (ವಿಜಯನಗರ) : ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ 10ನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಆಗಸ್ಟ್ 30ರಂದು ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡದವರಿಗೆ ಮೀಸಲಿರುತ್ತದೆ.
ಆಗಸ್ಟ್ 30ರ ಬೆಳಿಗ್ಗೆ 10 ರಿಂದ ಮದ್ಯಾಹ್ನ 12 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಅಂದು ಮಧ್ಯಾಹ್ನ 12.15ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಧ್ಯಾಹ್ನ 12.30ರವರೆಗೆ ಅವಕಾಶವಿರುತ್ತದೆ. ಅವಶ್ಯವಿದ್ದಲ್ಲಿ ಅದೇ ದಿನ ಮಧ್ಯಾಹ್ನ 1 ಗಂಟೆಯ ನಂತರ ಚುನಾವಣೆಯನ್ನು ನಡೆಸಲಾಗುವುದು ಎಂದು ಹೊಸಪೇಟೆ ತಹಶೀಲ್ದಾರರು ಹಾಗೂ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣೆ ಪಕ್ರಿಯೆ ಕೈಗೊಂಡ ಸಭೆಯಲ್ಲಿ ಹಾಜರಿರುವ ಸದಸ್ಯರು ಕೈ ಎತ್ತುವ ಮೂಲಕ ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯ ಪರ ಹಾಗೂ ವಿರುದ್ಧ ಮತ ಚಲಾಯಿಸಿದ ಬಗ್ಗೆ ನಡವಳಿಕೆ ಪುಸ್ತಕದಲ್ಲಿ ನಮೂದಿಸಿ, ಹೆಚ್ಚು ಮತಗಳನ್ನು ಪಡೆದು ಜಯಗಳಿಸಿದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹೆಸರಗಳನ್ನು ಘೋಷಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.