ಸೆಪ್ಟೆಂಬರ್ 2ರಂದು ಫೋನ್-ಇನ್ ಕಾರ್ಯಕ್ರಮ

Loading

ಹೊಸಪೇಟೆ (ವಿಜಯನಗರ): ಪ್ರಯಾಣಿಕರ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಹಾಗೂ ಸಲಹೆಗಳನ್ನು ಸ್ವೀಕರಿಸಿ ಕಲ್ಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 02ರಂದು ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ನಡೆಯಲಿದೆ.


ಸಾರ್ವಜನಿಕ ಪ್ರಯಾಣಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ ದೂರವಾಣಿ ಸಂಖ್ಯೆ ಮೊ:7760992314, 7760992317ಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಲು ಕೋರಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *