
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಅದರಿಂದ ತೆರವಾದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಸಂಜೆ 3:30ಕ್ಕೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿಗೊಳಿಸಲಿದೆ.
ರಾಜ್ಯದ ಕುತೂಹಲ ಭರಿತ ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕದನ ಯಾವಾಗ ನಡೆಯಲಿದೆ ಎನ್ನುವ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.
ಈ ಮಾಹಿತಿ ಯನ್ನು ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.