ಹೊಸಪೇಟೆ (ವಿಜಯನಗರ):2024-25ನೇ ಶೈಕ್ಷಣಿಕ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಸಮನ್ವಯ ಶಿಕ್ಷಣ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಬ್ಲಾಕ್ಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಸಂಪನ್ಮೂಲ ಶಿಕ್ಷಕರ (ಬಿ.ಐ.ಇ.ಆರ್.ಟಿ) ಹುದ್ದೆಗಳಿಗೆ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳಲು ನೇರಗುತ್ತಿಗೆಯಡಿ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪೂರ್ವ ಪ್ರಾಥಮಿಕ ಹಾಗೂ 1 ರಿಂದ 5ನೇ ತರಗತಿ, 6 ರಿಂದ 8ನೇ ತರಗತಿ ಮತ್ತು 9 ರಿಂದ 12ನೇ ತರಗತಿಗೆ ಬೋಧಿಸಲು ವಿಶೇಷ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆರ್ಸಿಐನಲ್ಲಿ ನೋಂದಣಿ ಹೊಂದಿದ ಹಾಗೂ ಸಿ.ಆರ್.ಆರ್ ನಂಬರ್ ಮಾನ್ಯತೆ ಹೊಂದಿರುವ ಹಾಗೂ ಚಾಲ್ತಿಯಲ್ಲಿರುವ ಸಂಸ್ಥೆಗಳಿAದ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಸೇವಾ ಜೇಷ್ಠತೆಯನ್ನು ಪರಿಗಣಿಸಲಾಗುವುದು.
ಹುದ್ದೆಗಳು ತಾತ್ಕಾಲಿಕವಾಗಿದ್ದು, 2025ರ ಮಾ.31ರವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಇರುತ್ತದೆ. ನೇರ ಗುತ್ತಿಗೆಯಡಿ ತಾತ್ಕಾಲಿಕವಾಗಿ ಸೇವೆ ಪಡೆದ ವಿಶೇಷ ಶಿಕ್ಷಕರು ಬಿ.ಐ.ಇ.ಆರ್.ಟಿ ಹುದ್ದೆಗಳು ಸರ್ಕಾರಿ ಶಾಲಾ ವಿಶೇಷ ಶಿಕ್ಷಕರಿಂದ ಭರ್ತಿಯಾದಲ್ಲಿ ನೇರ ಗುತ್ತಿಗೆಯ ಬಿ.ಐ.ಇ.ಆರ್.ಟಿಗಳನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲಾಗುವುದು.
ಆಸಕ್ತರು ಜೂನ್ 20ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಉಪ ನಿರ್ದೇಶಕರು ಮತ್ತು ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ವಿಜಯನಗರ ಜಿಲ್ಲಾ ಕಚೇರಿ ಇವರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ವಿಜಯನಗರ ಜಿಲ್ಲೆ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.