ಪ್ರವಾಸಿ ಮಾರ್ಗದರ್ಶಿ ತರಬೇತಿ: ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನ

Loading

ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ 2023-24ನೇ ಸಾಲಿನಲ್ಲಿ 75 ಇತರೆ ಪ್ರವಾಸಿ ಗೈಡ್‌ಗಳಿಗೆ ಹಾಗೂ ಜಲಪಾತ, ಅರಣ್ಯಧಾಮ, ಪರಿಸರಧಾಮ ಇನ್ನಿತರೆ ಪ್ರಾಕೃತಿಕ ನೈಸರ್ಗಿಕ ಪ್ರವಾಸಿ ತಾಣಗಳಲ್ಲಿ ಕಾರ್ಯನಿರ್ವಹಿಸಲು 25 ನೇಚರ್ ಗೈಡ್‌ಗಳು ಸೇರಿ ಒಟ್ಟು 100 ಜನ ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿತ್ತು.

ಈ ಸಂಬಂಧ ಅಧಿಸೂಚನೆಯಲ್ಲಿ ತಿಳಿಸಲಾದ ಷರತ್ತುಗಳು ಮತ್ತು ನಿಬಂಧನೆಗಳAತೆ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಹ ಹಾಗೂ ಅನರ್ಹವಾದ ಅಭ್ಯರ್ಥಿಗಳ ವಿವರವನ್ನು ಸಿದ್ದಪಡಿಸಲಾಗಿದೆ. ಈ ಪಟ್ಟಿಯನ್ನು ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಸೂಚನಾಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.

ಈಪÀಟ್ಟಿಯ ಬಗ್ಗೆ ಆಕ್ಷೇಪಣೆಗಳೇನಾದರು ಇದ್ದಲ್ಲಿ ಸೂಕ್ತ ಹಾಗೂ ಸಮರ್ಥ ದಾಖಲೆಗಳೊಂದಿಗೆ ಜೂನ್ 19ರೊಳಗೆ ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ. ಅವಧಿ ಮೀರಿಬಂದ ಆಕ್ಷೇಪಣೆಗಳನ್ನು ಮಾನ್ಯ ಮಾಡಲಾಗುವುದಿಲ್ಲ ಎಂದು ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಹಾಗೂ ಪ್ರವಾಸಿ ಮಾರ್ಗದರ್ಶಿ ತರಬೇತಿಯ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಅನುರಾಧ ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *