ಜೂನ್ 14ರಿಂದ ಎಸ್ಸೆಸ್ಸೆಲ್ಸಿಪರೀಕ್ಷೆ: ನಿರ್ಬಂಧಿತ ಪ್ರದೇಶ ಘೋಷಿಸಿ ಆದೇಶ

Loading

ಹೊಸಪೇಟೆ ವಿಜಯನಗರ ಜಿಲ್ಲೆ : ವಿಜಯನಗರ ಜಿಲ್ಲಾದ್ಯಂತ ಜೂನ್ 14 ರಿಂದ ಜೂನ್ 22ರವರೆಗೆ 22 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದAತೆ ಮತ್ತು ಈ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಬಹುದಾದ ಅವ್ಯವಹಾರಗಳನ್ನು ತಡೆಗಟ್ಟುವ ಸಂಬAಧ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.


ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರಗಳು ಕಾರ್ಯನಿರ್ವಹಿಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ಈ ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಯಾವುದೇ ಬಾಹ್ಯ, ಅನ್ಯ ವ್ಯಕ್ತಿಗಳಿಗೆ ಹಾಗೂ ಟೆಲಿವಿಷನ್ ಮಾಧ್ಯಮದವರು ಮತ್ತು ಪತ್ರಕರ್ತರಿಗೆ ಪ್ರವೇಶ ನಿಷೇಧಿಸಿದೆ. ಈ ಆದೇಶವು ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಅಧಿಕಾರಿ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *