ಹೊಸಪೇಟೆ (ವಿಜಯನಗರ) : ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಜೂನ್ 21ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಬಳಿಕ ಟಿ.ಬಿ.ಡ್ಯಾಮ್‌ನ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಜೂನ್ 22ರಂದು ಮಧ್ಯಾಹ್ನ 2.30ಕ್ಕೆ ಹೊಸಪೇಟೆಯಿಂದ ನಿರ್ಗಮಿಸಿ ಕಲಬುರಗಿ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.